ಹೊನ್ನಾವರ: ಬೆಂಗಳೂರಿನ ಕ್ರೈಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕøತಿಕ ಸಹಪಠ್ಯ ಚಟುವಟಿಕೆಯಾದ ಭಕ್ತಿಗೀತೆ ಸ್ಪರ್ಧೆಯಲ್ಲಿ ಹೊನ್ನಾವರದ ಎಂ.ಪಿ.ಇ. ಸೊಸೈಟಿಯ, ಎಸ್. ಡಿ. ಎಂ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನಿಹಾರಿಕಾ ಶ್ರೀಧರ ಭಟ್ಟ ಇವಳು ದ್ವಿತೀಯ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾಳೆ. ಇವಳ ಸಾಧನೆಯನ್ನು ಕಾಲೇಜಿನ ಘನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.