ಕುಮಟಾ: “ಶಾಲಾ ಮಟ್ಟದಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗುವುದರಿಂದ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಕ್ರೀಡೆ ಸಹಕಾರಿಯಾಗಿದೆ” ಎಂದು ಶ್ರೀ ಬ್ರಹ್ಮಜಟಕ ಯುವಕ ಸಂಘ ಹಿರೇಗುತ್ತಿ ಅಧ್ಯಕ್ಷರಾದ ರಾಜು ಕೇ ಗಾಂವಕರ ನುಡಿದರು.


ಅವರು ಸೆಕೆಂಡರಿ ಹೈಸ್ಕೂಲ್ ಕ್ರೀಡಾಂಗಣದಲ್ಲಿ ನಡೆದ 2020ರ ಹೈಸ್ಕೂಲ್ ವಾರ್ಷಿಕ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. “ಸದೃಢ ದೇಹದಲ್ಲಿ ಸದೃಢ ಮನಸ್ಸನ್ನೂ ಹುಟ್ಟು ಹಾಕುವುದೇ ಶಿಕ್ಷಣ, ಹೈಸ್ಕೂಲ್‍ನವರು ಅತೀ ಅಚ್ಚುಕಟ್ಟಾಗಿ ಕ್ರೀಡಾಕೂಟ ಸಂಘಟಿಸಿದ್ದಾರೆ ಕ್ರೀಡಾಕೂಟ ಯಶಸ್ವಿಯಾಗಲಿ” ಎಂದು ಶುಭಕೋರಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲ ಉದಯ ನಾಯಕ ಕೆಂಚನ್‍ರವರು “ಜೀವನದುದ್ದಕ್ಕೂ ಆರೋಗ್ಯಕರ ದೈಹಿಕ ಚಟುವಟಿಕೆಗಳನ್ನು ಅನುಭವಿಸಲು ಅಗತ್ಯ ಜ್ಞಾನ, ಕೌಶಲ್ಯ ಹಾಗೂ ದಿಟ್ಟತನವುಳ್ಳ ದೈಹಿಕವಾಗಿ ಸುರಕ್ಷಿತ ವ್ಯಕ್ತಿಗಳನ್ನು ರೂಪಿಸಲು ಶಾಲೆಯಲ್ಲಿ ನಡೆಯುವ ಕ್ರೀಡಾಕೂಟಗಳು ಸಹಾಯಕವಾಗಿದೆ” ಎಂದರು.

RELATED ARTICLES  ಕುಮಟಾದಲ್ಲಿ ಭಂಡಾರಿ ಸಾಮಾಜದ ಸಾಮೂಹಿಕ ಸತ್ಯನಾರಾಯಣ ಪೂಜೆ


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಾಧ್ಯಾಪಕ ರೋಹಿದಾಸ ಎಸ್ ಗಾಂವಕರ “ದೈಹಿಕ ಚಟುವಟಿಕೆಗಳಿಂದಾಗಿ ದೈಹಿಕ ಸಧÀೃಡತೆ ದೊರಕುವುದಲ್ಲದೆ ಬುದ್ಧಿಯೂ ವಿಕಾಸಗೊಳ್ಳುವುದು. ಅದಕ್ಕಾಗಿ ಕ್ರೀಡಾಕೂಟ ನಡೆಸಲು ಯೋಜಕರು ಅತೀ ಮುಖ್ಯ ಯೋಜಕರಿಂದ ಕ್ರೀಡಾಕೂಟ ಯಶಸ್ವಿಯಾಗುತ್ತದೆ” ಎಂದರು.
ದೈಹಿಕ ಶಿಕ್ಷಕ ನಾಗರಾಜ ನಾಯಕ ಕಾರ್ಯಕ್ರಮ ಸಂಘಟಿಸಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಿಕ್ಷಕರಾದ ಬಾಲಚಂದ್ರ ಹೆಗಡೇಕರ್, ವಿಶ್ವನಾಥ ಬೇವಿನಕಟ್ಟಿ, ಜಾನಕಿ ಗೊಂಡ, ಇಂದಿರಾ ನಾಯಕ, ಶಿಲ್ಪಾ ನಾಯಕ, ಕವಿತಾ ಅಂಬಿಗ ಉಪಸ್ಥಿತರಿದ್ದರು.

RELATED ARTICLES  ಜನತೆಯ ಅನುಕೂಲಕ್ಕೆ ಕೆಳ ಸೇತುವೆ ನಿರ್ಮಿಸಿ: ಅಂಕೋಲಾ ಜನತೆಯ ಮನವಿ

ಶ್ವೇತಾ ಸಂಗಡಿಗರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವಿದ್ಯಾರ್ಥಿ ಪ್ರತಿನಿಧಿ ಶಿವರಾಜ ನಾಯಕ ಸರ್ವರನ್ನೂ ಸ್ವಾಗತಿಸಿದರು. ಶಿಕ್ಷಕ ಎನ್ ರಾಮು ಹಿರೇಗುತ್ತಿ ನಿರೂಪಣೆ ಮಾಡಿದರು. ವಿದ್ಯಾರ್ಥಿನಿ ಶಿಕ್ಷಕ ಮಹಾದೇವ ಗೌಡÀ ವಂದಿಸಿದರು. ನಂತರ ಶಾಲಾ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ವರದಿ: ಎನ್ ರಾಮು ಹಿರೇಗುತ್ತಿ