ಕುಮಟಾ:ವಿದ್ಯಾರ್ಥಿಗಳು ಅತಿಯಾಗಿ ಮೊಬೈಲ್ ಬಳಸುವುದನ್ನು ಕಡಿಮೆ ಮಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡುವಂತಾಗಬೇಕು ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ಪಟ್ಟಣದ ನೆಲ್ಲಿಕೇರಿಯ ಹನುಮಂತ ಬೆಣ್ಣೆ ಪದವಿಪೂರ್ವ ಕಾಲೇಜಿನ 2019-20 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೆಲ್ಲಿಕೇರಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಪಠ್ಯದಲ್ಲಷ್ಟೇ ಅಲ್ಲದೇ, ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿರುವುದು ನಿಜಕ್ಕೂ ಸಂತಸದ ಸಂಗತಿ. ವಿದ್ಯಾರ್ಥಿಗಳು ಮೋಜು-ಮಸ್ತಿಯಿಂದ ಸ್ವಲ್ಪ ದೂರ ಉಳಿದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತಿ ಸಾಧಿಸಬಹುದಾಗಿದೆ. ರಾಜ್ಯದಲ್ಲಿಯೇ ಮಾದರಿ ಕಾಲೇಜು ಎಂಬ ಹೆಸರು ನಿರ್ಮಾಣವಾಗಲು ಉಪನ್ಯಾಸಕ ವರ್ಗದವರು ಪ್ರಯತ್ನಿಸಬೇಕಿದ್ದು, ಅದಕ್ಕೆ ವಿದ್ಯಾರ್ಥಿಗಳು ಸಂಪೂರ್ಣ ಸಹಕಾರ ನೀಡಬೇಕು. ಪ್ರಾಚಾರ್ಯ ಹಾಗೂ ಉಪನ್ಯಾಸಕ ವೃಂದದ ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿದ್ದಾರೆ. ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕೆ ಉತ್ತಮ ವಾತಾವರಣವಿದ್ದು, ಅದನ್ನು ಸದುಪಯೋಗಪಡಿಸಿಕೊಂಡು, ಉಪನ್ಯಾಸಕರ ಹಾಗೂ ಪಾಲಕರ ಆಸೆಯನ್ನು ಈಡೇರಿಸಲು ವಿದ್ಯಾರ್ಥಿಗಳು ಶ್ರಮಿಸಬೇಕಿದೆ. ಕಾಲೇಜಿಗೆ ಮೂಲಭೂತ ಸೌಲಭ್ಯ ಒದಗಿಸಲು ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು, ಅದನ್ನು ಕಾರ್ಯರೂಪಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ನಡೆಸುತ್ತೇನೆ “ಎಂದು ಭರವಸೆ ನೀಡಿದರು.

RELATED ARTICLES  ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧನಾಗಿದ್ದವನನ್ನು ತಡೆದು ಬುದ್ದಿಹೇಳಿದ ಪೊಲೀಸರು

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎನ್.ಹೆಗಡೆ ಮಾತನಾಡಿ,” ವೈಯಕ್ತಿಕ ಆಸಕ್ತಿ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ಸಾಧನೆ ಮಾಡುವುದು ಸುಲಭ. ನೆಲ್ಲಿಕೇರಿ ಸರ್ಕಾರಿ ಕಾಲೇಜು ಎಲ್ಲ ಸಂದರ್ಭದಲ್ಲಿಯೂ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಯಶಸ್ಸುಗಳಿಸುವಾಗ ಸ್ಪಷ್ಟ ಗುರಿ ಹಾಗೂ ಸಮರ್ಪಕ ದಾರಿ ಅತ್ಯವಶ್ಯವಾಗಿದೆ “ಎಂದರು.
ಇನ್ನು ಇದೇ ವೇಳೆ ವಿದ್ಯಾರ್ಥಿಗಳು ರಚಿಸಿದ ಜ್ಞಾನದುಂಬಿ ಹಸ್ತಪತ್ರಿಕೆಯನ್ನು ಲೋಕಾರ್ಪಣೆಗೊಳಿಸಲಾಯಿತು. ಕಾರವಾರ ಶಿವಾಜಿ ಕಾಲೇಜಿನ ಪ್ರಾಚಾರ್ಯ ಡಾ.ಶಿವಾನಂದ ನಾಯಕ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಸತೀಶ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಾಂಸ್ಕೃತಿಕ, ಕ್ರೀಡಾ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

RELATED ARTICLES  ಡಿ.22‌ ರಿಂದ‌ ಡಿ.24ರವರೆಗೆ ದತ್ತಿನಿಧಿ ಹಾಗೂ ಪ್ರತಿಭಾ ಪುರಸ್ಕಾರ, ಸಂಗೀತ ಸಿಂಚನ ಸಮಾರಂಭ