ಕುಮಟಾ : ಸತತ ಎರಡನೇಯ ಬಾರಿಗೆ ರಾಜ್ಯಮಟ್ಟದ ಚುನಾವಣಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕು. ಸೌಜ್ಞಾ ಹಾಗೂ ಕು. ದೀಕ್ಷಾ ಇವರು ಉತ್ತಮ ಪ್ರದರ್ಶನ ತೋರಿ ಉತ್ತರ ಕನ್ನಡದ ಹಿರಿಮೆಯನ್ನು ರಾಜ್ಯಮಟ್ಟದಲ್ಲಿ ಪಸರಿಸಿದ್ದಾರೆ.
ಇವರಿಗೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರ ಕನ್ನಡ, ಶಾಲಾ ಮುಖ್ಯಾಧ್ಯಾಪಕರಾದ ಶ್ರೀ ವಿವೇಕ ಆಚಾರಿ, ಮಾರ್ಗದರ್ಶಕರದ ಶ್ರೀ ಮನೋಹರ ಹರಿಕಂತ್ರ, ಅಧ್ಯಕ್ಷರು ಹಾಗೂ ಸದಸ್ಯರು ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.