ಶಿರಸಿ : ಕದಂಬೋತ್ಸವದ ಅಂಗವಾಗಿ ಫೆ.9 ರಂದು ತಾಲೂಕಿನ ಬನವಾಸಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಡಳಿತದ ಸಹಕಾರದಲ್ಲಿ ಸಾಂಸ್ಕøತಿಕ ನಡಿಗೆ ಆಯೋಜಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು ಕೋರಿದ್ದಾರೆ.
ಅಂದು ಬೆಳಿಗ್ಗೆ 8 ಗಂಟೆಗೆ ಬನವಾಸಿಯ ಮಧುಕೇಶ್ವರ ದೇವಸ್ಥಾನದಿಂದ ಆರಂಭವಾಗಲಿರುವ ಈ ಸಾಂಸ್ಕøತಿಕ ನಡಿಗೆ ಮಯೂರವರ್ಮ ವೇದಿಕೆಯ ಬಳಿ ಕೊನೆಗೊಳ್ಳುತ್ತದೆ. ಈ ನಡಿಗೆಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ, ಶಾಸಕ ಶಿವರಾಮ ಹೆಬ್ಬಾರ, ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಮುಂತಾದ ಗಣ್ಯರು ಹೆಜ್ಜೆ ಹಾಕಲಿದ್ದಾರೆ. ಈ ಸಾಂಸ್ಕøತಿಕ ನಡಿಗೆಯಲ್ಲಿ ಜಿಲ್ಲೆಯ ಹಿರಿಕಿರಿಯ ಸಾಹಿತಿಗಳು, ಕಲಾವಿದರು, ಕನ್ನಡ ಪರ ಸಂಘಟನೆಗಳು, ಕನ್ನಡಾಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಕ.ಸಾ.ಪ. ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.