ಯಲ್ಲಾಪುರ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಡೆಮಿ ವತಿಯಿಂದ ನಡೆದ ರಾಜ್ಯಮಟ್ಟದ ವಿಜ್ಞಾನ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ದೋಣಗಾರಿನ ದಿನೇಶ ಗಣಪತಿ ಹೆಬ್ಬಾರ ಮೂರನೇ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ. ಜಾಗತಿಕ ತಾಪಮಾನ ಹಾಗೂ ಆರೋಗ್ಯ ಕುರಿತು ಸ್ಪರ್ಧೆ ಏರ್ಪಡಿಸಲಾಗಿತ್ತು.
ಪ್ರಸ್ತುತ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬಿಎಸ್‍ಸಿ ವ್ಯಾಸಂಗ ಮಾಡುತ್ತಿರುವ ದಿನೇಶ ಹೆಬ್ಬಾರ, ರಾಜ್ಯ, ರಾಷ್ಟ್ರಮಟ್ಟದ ಭಾಷಣ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಸಾಧನೆ ಮಾಡಿದ್ದಾರೆ.