ಬೆಂಗಳೂರು: ಮಾರಣಾಂತಿಕ ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳಲ್ಲಿ 100ಕ್ಕಿಂತಲೂ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

RELATED ARTICLES  ತುಳಸಿ ಗುರುಕುಲಕ್ಕೆ ಪ್ರವೇಶಾವಕಾಶ

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು ಮತ್ತು ಜಾತ್ರೆಗಳನ್ನು ಬಂದ್ ಮಾಡಲಾಗುತ್ತಿದೆ. ಒಂದು ವಾರದ ನಂತರ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

RELATED ARTICLES  ಕೆಲಸ ಮುಗಿಸಿ ಬರುವಾಗ ಕಾಲುಜಾರಿ ಬಾವಿಗೆ ಬಿದ್ದು ಯುವತಿ ಸಾವು