ಕುಮಟಾ : ಉತ್ತರಕನ್ನಡ ಜಿಲ್ಲೆಯಲ್ಲಿ COVID19 (ಕರೋನಾ) ಸೋಂಕು ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು ಎಂದು ಸಚಿವ ಶಿವರಾಮ ಹೆಬ್ಬಾರ್ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.
ಜಿಲ್ಲಾಡಳಿತ ವೈರಸ್ ಹರಡದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ ಯಾರು ಸಹ ಭಯಪಡದೆ, ಎಲ್ಲಾ ನಾಗರಿಕರೂ ಎಚ್ಚರಿಕೆವಹಿಸಿ, ಜವಾಬ್ದಾರಿಯಿಂದ ಇರಬೇಕಾಗಿ ವಿನಂತಿಕೊಳ್ಳುತ್ತೆನೆ.
ಇಂತಹ ಸಂದರ್ಭಗಳಲ್ಲಿ ಕರೊನಾ ವೈರಸ್ ಬಗ್ಗೆ ಜನತೆಗೆ ಸಾಮಾಜಿಕ ಜಾಲತಾಣದ ಮೂಲಕವಾಗಿ ಸುಳ್ಳು ವದಂತಿಗಳನ್ನು ಹಬ್ಬಿಸುವವ ವಿರುದ್ಧ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.