ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ (102) ಅವರು ವಿಧಿವಶರಾಗಿದ್ದಾರೆ.
ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಜಿಲ್ಲೆಯ ಕಿಮ್ಸ್‌ನಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ.
ನಾಡೋಜ ಪಾಪು ಅವರು, ವಿಪರೀತ ಜ್ವರ, ಉಸಿರಾಟ ತೊಂದರೆ ಹಾಗೂ ಆಯತಪ್ಪಿ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ದೀರ್ಘಕಾಲದ ಪುಪ್ಪಸ ತೊಂದರೆ ಹಾಗೂ ತಲೆಯಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಮಾಡಲಾಗಿತ್ತು. ಕಿಡ್ನಿ ತೊಂದರೆ, ರಕ್ತ ಹೀನತೆ ಹಾಗೂ ಸೋಂಕು ಕಂಡು ಬಂದಿದ್ದು, ಎಲ್ಲಾ ಖಾಯಿಲೆಗಳಿಗೆ ಚಿಕಿತ್ಸೆ ನೀಡಲಾಗಿತ್ತು.