ಕುಮಟಾ: ಕೊರೊನಾ ತಡೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡನ್ನು ಕಾಯ್ದಿರಿಸಬೇಕು. 24×7 ಮಾದರಿಯಲ್ಲಿ ಜಿಲ್ಲಾಡಳಿತ ತುರ್ತಾಗಿ ಕ್ರಮಕೈಗೊಳ್ಳಲು ಸಜ್ಜಾಗಿರುವಂತೆ ಒತ್ತಾಯಿಸುತ್ತೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.
ಬುಧವಾರ ತಾಲೂಕಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,” ಜಿಲ್ಲಾ ಕೇಂದ್ರದಲ್ಲಿ ಕೊರೊನಾ ಸೋಂಕಿತರ ಬಗ್ಗೆ ಪ್ರತ್ಯೇಕ ಆಂಬ್ಯುಲೆನ್ಸ ವಾಹನ ನಿಗದಿ ಮಾಡಬೇಕು. ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಕಾರ್ಯಪಡೆ ರಚಿಸಿ ಕೊರೊನಾ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೊರೊನಾ ಸಾಧಕ ಬಾಧಕಗಳ ತಿಳುವಳಿಕೆ ನೀಡಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ. ಉತ್ತರ ಕನ್ನಡ ಜಿಲ್ಲಾಡಳಿತ ಸರ್ಕಾರದ ನಿರ್ದೇಶನದಂತೆ ಕೊರೊನಾ ಸಂಬಂಧವಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೂ ಸಾರ್ವಜನಿಕರು ಕೊರೊನಾ ಬಗ್ಗೆ ಸುಳ್ಳು ವದಂತಿಗಳನ್ನು ನಂಬಿ ಅನಗತ್ಯ ಗಾಬರಿ ಬೀಳದೇ ವಿಶ್ವ ಆರೋಗ್ಯ ಸಂಸ್ಥೆಯ ವೈದ್ಯಕೀಯ ಮಾರ್ಗಸೂಚಿಯಂತೆ ಮುಂಜಾಗೃತೆ ವಹಿಸಬೇಕು “ಎಂದರು.
ಈ ಸಂದರ್ಭದಲ್ಲಿ ಡಾ.ಜಿ.ಜಿ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಐ.ಹೆಗಡೆ, ಎನ್.ಎಸ್.ಹೆಗಡೆ, ಪ್ರಶಾಂತ ನಾಯ್ಕ, ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಜಿ.ಜಿ. ಗುನಗಾ, ಅಶೋಕ ಪ್ರಭು, ವಿನಾಯಕ ನಾಯ್ಕ, ವಿಶ್ವನಾಥ ನಾಯ್ಕ ಸೇರಿದಂತೆ ಇತರರು ಇದ್ದರು.