ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಭಾನುವಾರ, ಮಾರ್ಚ್ 22ಕ್ಕೆ ಜನತಾ ಕರ್ಫ್ಯೂಗೆ ಕರೆ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಯ ಜನತೆಯು ಭಾಗಿಯಾಗಲು ಕೋರಲಾಗಿದೆ.
ಜನತಾ ಕರ್ಫ್ಯೂ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆದೇಶ ಉಲ್ಲಂಘನೆ ಮಾಡಿದ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
“ಮಾರ್ಚ್ 22ರಂದು ಜಿಲ್ಲೆಗೆ ತುರ್ತು ಅಗತ್ಯತೆಗಾಗಿ ಮಾತ್ರ ಬರಲು ಅವಕಾಶವಿದ್ದು, ರೈಲ್ವೆ, ಬಸ್ ಸೇರಿದಂತೆ ಎಲ್ಲಾ ಬಗೆಯ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲೆಯ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚೆಕ್‌ಪೋಸ್ಟ್ ಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದೆ” ಸಂತೆ, ಮೆಡಿಕಲ್ ಇನ್ನಿತರ ಸೇವೆಗಳಿಗೆ ತಾತ್ಕಾಲಿವಾಗಿ ಬಂದ್ ಘೋಷಿಸಲಾಗಿದೆ.