ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೇ 27ರಿಂದ ನಡೆಯಬೇಕಿದ್ದ ಎಸ್’ಎಸ್’ಎಲ್’ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಸಿಬಿಎಸ್ಸಿ, ಐಸಿಎಸ್‌ಇ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು, ಈಗ ರಾಜ್ಯ ಸರ್ಕಾರ ಹತ್ತನೇ ತರಗತಿ ಪರೀಕ್ಷೆ ಮುಂದೂಡುವ ಕುರಿತು ಮಹತ್ವದ ತೀರ್ಮಾನ ಕೈಗೊಂಡಿದೆ.
ಪರೀಕ್ಷೆ ಮುಂದೂಡುವ ಕುರಿತಂತೆ ಹಲವು ಸುತ್ತಿನ ಸಮಾಲೋಚನೆ ನಡೆದಿದ್ದು, ಅಂತಿಮವಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳುವುದು ಒಳ್ಳೆಯದು ಎಂಬ ತೀರ್ಮಾನಕ್ಕೆ ಬರಲಾಗಿದೆ.
ಈ ಮೊದಲು 9ನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಪಡಿಸಿದ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿತ್ತು.