ಭಟ್ಕಳ: ಕೋವಿಡ್ -19 ವೈರಾಣು ಸೊಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುದ್ದು, ಅದರಲ್ಲಿ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿಗೆ ವಿದೇಶದಿಂದ ಬಂದಿರುವವವರ ಸಂಖ್ಯೆ ಹೆಚ್ಚಿರುವ ಹಿನ್ನಲೆಯಲ್ಲಿ ನಾಳೆಯಿಂದ ಭಟ್ಕಳ ತಾಲೂಕಿನ ಸಂಪರ್ಕವನ್ನ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕರಿ ಡಾ ಹರೀಶಕುಮಾರ ಆದೇಶ ಹೊರಡಿಸಿದ್ದಾರೆ.
ಇನ್ನೂ ಜಿಲ್ಲೆಯ ಉಳಿದ ತಾಲೂಕಿನಲ್ಲಿಯೂ ನಾಳೆಯಿಂದ 144 ಜಾರಿ ಮಾಡಿಲಾಗಿದೆ. ನಿನ್ನೆ ಭಟ್ಕಳದ ಯುವಕನಲ್ಲಿ ಕೊರೋನಾ ಕಾಣಿಸಿಕೊಂಡಿರುವುದರಿಂದ ನಮ್ಮ ಜಿಲ್ಲೆಗೆ ಅಥವಾ ಭಟ್ಕಳಕ್ಕೆ ಯಾವುದೆ ತೊಂದರೆ ಇಲ್ಲ. ಆ ಯುವಕ ಭಟ್ಕಳಕ್ಕೆ ಬರುವ ಮೊದಲೆ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಯಾರು ಭಯಪಡಬೇಕಾಗಿಲ್ಲ.