ಕುಮಟಾ : ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಬಗ್ಗೆ ರಾಜ್ಯದಲ್ಲಿ ಆತಂಕ ಹೆಚ್ಚುತ್ತಿರುವ ನಡುವೆಯೇ ಸೋಂಕಿತರ ಸಂಖ್ಯೆಯೂ ಏರಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಗೂ ನಾಳೆಯಿಂದ ಉತ್ತರ ಕನ್ನಡದಲ್ಲಿ ಸೆಕ್ಷನ್ 144 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಟಾದ ಉದಯ ಬಜಾರ್ ನಲ್ಲಿ ಸಹ ಯಾವುದೇ ರೀತಿಯ ವ್ಯಾಪಾರ ವಹಿವಾಟು ನಡೆಯುವುದಿಲ್ಲವೆಂದು ಬಜಾರ್ ನ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.
ಮಾರ್ಚ 24 ರಿಂದ 31 ರ ವರಗೆ ಯಾವುದೇ ರೀತಿಯ ವ್ಯಾಪಾರ ವಹಿವಾಟು ಇರುವುದಿಲ್ಲ ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಕರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ನೌಕರರ ಸುರಕ್ಷತಾ ದೃಷ್ಟಿಯಿಂದ ಸಂಸ್ಥೆಯ ರಿಟೇಲ್ ಹಾಗೂ ಉತ್ಪಾದನಾ ಘಟಕಗಳು ಕಾರ್ಯ ಸ್ಥಗಿತಗೊಳಿಸಲಾಗುವುದೆಂದು ಎಂದು ಮಾಹಿತಿ ತಿಳಿಸಿದ್ದಾರೆ.