ಶಿರಸಿ : ಇಟಲಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಉತ್ತರಕನ್ನಡ ಮೂಲದ ಯುವತಿಯೊಬ್ಬಳು ತನ್ನಿಂದ ಸೋಂಕು ಹರಡಬಾರದು ಎನ್ನುವ ಉದ್ದೇಶದಿಂದ ವಿದೇಶದಲ್ಲಿಯೇ ಉಳಿದುಕೊಂಡು ಮಾದರಿಯಾಗಿದ್ದಾಳೆ.

ಮೂಲತಃ ಉತ್ತರಕನ್ನಡ ಜಿಲ್ಲೆಯ ಶಿರಸಿ ಮೂಲದ ಪ್ರತಿಭಾ ಹೆಗಡೆ ಸದ್ಯ ಇಟಲಿಯಲ್ಲಿಯೇ ಉಳಿದುಕೊಳ್ಳುವ ದಿಟ್ಟ ನಿರ್ಧಾರ ಮಾಡಿರುವ ಯುವತಿ.ಈಕೆ ಅಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾಳೆ.

ಈಕೆ ತನ್ನ ಫೇಸ್ ಬುಕ್ ನಲ್ಲಿ ಬರೆದ ವಿಚಾರ ಈಗ ಎಲ್ಲಡೆ ಹರಿದಾಡುತ್ತಿದೆ. ಆ ವಿಷಯ ಏನು ಅಂತೀರಾ? ಅದು ಹೀಗಿದೆ.

ನಾನು ಇಟಲಿಯ ನೇಪಲ್ಸ್ ನಗರದಲ್ಲಿ ಪಿಎಚ್ಡಿ ವ್ಯಾಸಂಗ ಮಾಡ್ತಾ ಇದ್ದೇನೆ. ಒಂದೆರಡು ವಾರಗಳಿಂದ ಭಾರತದಲ್ಲಿರುವ ನನ್ನ ಸ್ನೇಹಿತರು ಮತ್ತು ಕುಟುಂಬದವರು ಮನೆಗೆ ವಾಪಸ್ ಬಂದುಬಿಡಬಹುದಲ್ಲ ಅಂತ ಸಲಹೆ ನೀಡುತ್ತಾ ಇದ್ದಾರೆ. ನಾನು ಇಲ್ಲೇ ಇರಲು ಡಿಸೈಡ್ ಮಾಡಿದೆ. ಕಾರಣ ಸಿಂಪಲ್. ನನ್ನ ನಗರದಲ್ಲಿ ಎಷ್ಟೇ ಜನರಿಗೆ COVID-19 ಬಂದಿರಲಿ, ನಾನು ಮನೆಯಲ್ಲೇ ಇದ್ದರೆ ಏನೂ ಸಹ ಆಗುವುದಿಲ್ಲ. ನಾನು ಬದಲಾಗಿ ಭಾರತಕ್ಕೆ ಬರುವ ಹಾದಿಯಲ್ಲಿ ಎಷ್ಟೋ ಜನರ ನಡುವೆ ಇದ್ದು ಸುಮಾರು 15 ಗಂಟೆಗಳ ಪ್ರಯಾಣ ಮಾಡಬೇಕು. ಭಾರತಕ್ಕೆ corona ಹೊತ್ತೊಯ್ಯುವದು ಬಿಟ್ಟರೆ ಬೇರೆ ಯಾವ ಉಪಯೋಗವು ಅದರಲ್ಲಿ ಇಲ್ಲ.

RELATED ARTICLES  ನಾಳೆ ಉತ್ತರಕನ್ನಡದಲ್ಲಿ ಅತೀ ಹೆಚ್ಚು ಕೋವಿಡ್ ವ್ಯಾಕ್ಸೀನ್ ಲಭ್ಯ

ಈಗ ಪ್ರಸ್ತುತ ಭಾರತದ ನಗರಗಳಲ್ಲಿ ಕೆಲಸ ಮಾಡುತ್ತಿರುವ ಜನರೂ ನನ್ನ ಪರಿಸ್ಥಿತಿಯಲ್ಲಿಯೇ ಇದ್ದೀರಿ. ಇದ್ದಲ್ಲೇ ಇರುವುದ ಬಿಟ್ಟು ಬಸ್ ರೈಲು ಹತ್ತಿ ಮನೆಗೆ ಹೋಗೋದ್ರಿಂದ ನಿಮಗೆ corona ತಾಕುವ, ಅಥವಾ ಮೊದಲೇ ಇದ್ದರೆ ಸಹಪ್ರಯಾಣಿಕರಿಗೂ ಕುಟುಂಬದವರಿಗೂ ತಗುಲಿಸುವ ಸಾಧ್ಯತೆಗಳೇ ಹೆಚ್ಚು. ಸರ್ಕಾರ ಬಸ್ ಗಳನ್ನ ಬಂದ್ ಮಾಡಿದರೂ ಕಷ್ಟ ಪಟ್ಟು ಇನ್ಯಾವ್ದೋ ರೀತಿಯಲ್ಲಿ ಮನೆ ಸೇರುವ ಅವಿವೇಕ ತೋರಬೇಡಿ. ದಯವಿಟ್ಟು ಇದ್ದಲ್ಲಿಯೇ ಇರಿ. ಮನೆ ಒಳಗೇ ಇರಿ.

RELATED ARTICLES  ಉತ್ತರಕನ್ನಡದ ಇಂದಿನ ಕೊರೋನಾ ವಿವರ

-ಪ್ರತಿಭಾ ಹೆಗಡೆ, Ph.D student, Department of Physics, University of Naples, Italy.

1f7620e6 dcc1 4229 bafd 792fa8da32f0