ಇಂದಿನ ಮಧ್ಯರಾತ್ರಿಯಿಂದ ಮುಂದಿನ 21 ದಿನಗಳ ಕಾಲ ಇಡೀ ದೇಶವೇ ಲಾಕ್​​ಡೌನ್​​ ಆಗಲಿದೆ ಈ ಬಗ್ಗೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಅಧಿಕೃತವಾಗಿ ಘೋಷಣೆ ಮಾಡಿದರು.

ಕೊರೋನಾ ವೈರಸ್​​ ವಿರುದ್ಧ ಹೋರಾಟಕ್ಕೆ ಸರ್ಕಾರದೊಂದಿಗೆ ಜನ ಕೈ ಜೋಡಿಸಬೇಕಿದೆ. ಹಾಗಾಗಿ ಕೇಂದ್ರದ ಆದೇಶವನ್ನು ಪಾಲಿಸಿ 21 ದಿನಗಳ ಕಾಲ ಮನೆಯಲ್ಲೇ ಇರಬೇಕಿದೆ. ನಾವು ಮುಂದಿನ 21 ದಿನ ದೇಶಕ್ಕಾಗಿ ಮನೆಯಲ್ಲೇ ಇರದೇ ಹೋದಲ್ಲಿ, ಭಾರತವು 21 ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES  ದೂರು ನೀಡಲು ಬಂದಿದ್ದ ಪತ್ನಿಗೆ ಥಳಿಸಿದ ಗಂಡ.!

ಇತ್ತೀಚೆಗಿನ ಜನತಾ ಕರ್ಫ್ಯೂ ಯಶಸ್ಸಿನಲ್ಲಿ ಪ್ರತಿಯೊಬ್ಬ ಭಾರತೀಯ ಕೊಡುಗೆ ಇದೆ. ಭಾರತವೂ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದೆ. ದೇಶವನ್ನು ಕೊರೋನಾದಿಂದ ಬಚಾವ್​​ ಮಾಡಲು ನಾವು ಮನೆಯಲ್ಲೇ ಉಳಿಯಬೇಕಿದೆ ಯಾವುದೇ ಕಾರ್ಯಕ್ರಮ ಯೋಜಿಸಬೇಡಿ ಎಂದರು.

RELATED ARTICLES  ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ : ಅದೇಕೆ ಗೊತ್ತಾ..?