ಭಟ್ಕಳ: ಹೆಲ್ತ್ ಎಮರ್ಜೆನ್ಸಿ ಇದ್ದರು ಅನವಶ್ಯಕವಾಗಿ ಓಡಾಟ ಮಾಡಿದ ಭಟ್ಕಳದಲ್ಲಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ದಲ್ಲಿ ನಡೆದಿದೆ.
ಕೆ.ಎಮ್ ಶಾಝೀರ್ ಎನ್ನುವವನ ವಿರುದ್ಧ ಪ್ರಕರಣ ದಾಖಲಾಗಿದ್ದು ಬೈಕ್ ನಲ್ಲಿ ಅನವಶ್ಯಕವಾಗಿ ಮಾಸ್ಕ್ ಹಾಕಿಕೊಳ್ಳದೇ ಓಡಾಡುತ್ತಿದ್ದ. ಪ್ರಶ್ನೆ ಮಾಡಿದ ಪೊಲೀಸರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.