ಮಡಿಕೇರಿ: ಮಡಿಕೇರಿಯಲ್ಲಿ ನಡೆದ ಸ್ವಾತಂತ್ರ್ಯದಿನದಂದು ವೇದಿಕೆ ಮೇಲೆ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರ ಕೈ ಹಿಡಿದಿದ್ದ, ಟಿಪಿ ರಮೇಶ್ ರಾಜೀನಾಮೆ ನೀಡಿದ್ದಾರೆ. ರಾಜ್ಯ ರೇಶ್ಮೆ ಮಾರಾಟ ಮಂಡಳಿ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ, ಈ ಎರಡಕ್ಕೂ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ ಅವರಿಗೆ ಕಳಿಸಿಕೊಟ್ಟಿದ್ದಾರೆ.
ಟಿಪಿ ರಮೇಶ್ ಅವರು ವೇದಿಕೆಯ ಮೇಲೆಯೇ ವೀಣಾ ಅಚ್ಚಯ್ಯ ಅವರ ಕೈಹಿಡಿದಿದ್ದರು. ಇದರಿಂದ ವೀಣಾ ಸಾರ್ವಜನಿಕವಾಗಿ ತೀವ್ರ ಮುಜುಗರಕ್ಕೆ ಒಳಗಾಗಿದ್ದರು. ಈ ವಿಡಿಯೋ ರಾಜ್ಯಾದ್ಯಂತ ವೈರಲ್ ಆಗಿತ್ತು. ಅಲ್ಲದೆ, ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ಇತ್ತೀಚಿನ ಘಟನೆಯಿಂದ ತಾವು ಬಹಳವಾಗಿ ಮನನೊಂದಿರುವುದಾಗಿ ರಾಜೀನಾಮೆ ಪತ್ರದಲ್ಲಿ ಹೇಳಿಕೊಂಡಿರುವ ರಮೇಶ್, ನಿಮ್ಮ ಆಶೀರ್ವಾದ ಸದಾಕಾಲ ನನ್ನ ಮೇಲಿರಲಿ ಎಂದು ಮುಖ್ಯಮಂತ್ರಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.