ಕಾರವಾರ : ಯಾವುದೇ ತುರ್ತು ಪರಿಸ್ಥಿತಿಯಲ್ಲಿದ್ದಾಗ ಸಹಾಯ ಹಸ್ತ ನೀಡುವ ಇನ್ಫೋಸಿಸ್‌ನ ಮುಖ್ಯಸ್ಥೆ ಸುಧಾಮೂರ್ತಿ ಈ ಬಾರಿ ಕೊರೋನಾ ಭೀತಿಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ನೆರವಿಗೆ ಧಾವಿಸಿದ್ದಾರೆ . ಕರೋನಾದಿ೦ದ ಉಂಟಾಗಿರುವ ಸಂಕಷ್ಟ ಪರಿಹಾರೊಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನ ,ಉತ್ತರ ಕನ್ನಡ ಜಿಲ್ಲೆಗೆ ಸುಮಾರು ೪೪ ಲಕ್ಷ ರೂ ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಿಕೊಟ್ಟಿದ್ದಾರೆ ಕಾರವಾರ : ಯಾವುದೇ ತುರ್ತು ಪರಿಸ್ಥಿತಿಯಲ್ಲಿದ್ದಾಗ ಸಹಾಯ ಹಸ್ತ ನೀಡುವ ಇನ್ಫೋಸಿಸ್‌ನ ಮುಖ್ಯಸ್ಥೆ ಸುಧಾಮೂರ್ತಿ ಈ ಬಾರಿ ಕೊರೋನಾ ಭೀತಿಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ನೆರವಿಗೆ ಧಾವಿಸಿದ್ದಾರೆ . ಕರೋನಾದಿ೦ದ ಉಂಟಾಗಿರುವ ಸಂಕಷ್ಟ ಪರಿಹಾರೊಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನ ,ಉತ್ತರ ಕನ್ನಡ ಜಿಲ್ಲೆಗೆ ಸುಮಾರು ೪೪ ಲಕ್ಷ ರೂ ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಿಕೊಟ್ಟಿದ್ದಾರೆ ಕೋಟ್ಯಾಂತರ ರೂ.ಗಳ ಆಸ್ತಿಗೆ ಮಾಲೀಕರಾಗಿದ್ದು , ಪ್ರತಿವರ್ಷ ಕೋಟ್ಯಾಂತರ ರೂಪಾಯಿಯ ವ್ಯವಹಾರ ನಡೆಸುವ ಈ ಸಂಸ್ಥೆಯು ಅನೇಕ ಸಾಮಾಜಿಕ ಕಾರ್ಯಗಳ ಮೂಲಕವೂ ಗಮನ ಸೆಳೆಯುತ್ತಲೇ ಬಂದಿದೆ .

RELATED ARTICLES  ಇಂದು ಉತ್ತರ ಕನ್ನಡದಲ್ಲಿ 108 ಕೊರೋನಾ ಪಾಸಿಟೀವ್ : ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ಅನೇಕ ಸಾಮಾಜಿಕ ಕಾರ್ಯಗಳನ್ನು ಹಾಗೂ ಚಾರಿಟಿ ಟ್ರಸ್ಟ್‌ಗಳನ್ನು ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಸುಧಾಮೂರ್ತಿ ಅವರು ನೋಡಿಕೊಳ್ಳುತ್ತಿದ್ದಾರೆ . ಕೊರೋನಾ ತುರ್ತು ಪರಿಸ್ಥಿತಿಯಲ್ಲಿ ಒಂದು ಕರೆಗೆ ಜಿಲ್ಲೆಯ ನೆರವಿಗೆ ಬಂದಿರುವ ಸುಧಾಮೂರ್ತಿ , ರಾಮದಾಸ್ ಕಾಮತ್ ಹಾಗೂ ಇನ್ಫೋಸಿಸ್ ಫೌಂಡೇಶನ್‌ನ ಇಡೀ ತಂಡಕ್ಕೆ ಜಿಲ್ಲಾಡಳಿತ ಕೃತಜ್ಞತೆ ಸಲ್ಲಿಸಿದೆ. ಇನ್ನು ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಕರ್ತವ್ಯ ನಿರತರಾಗಿರುವ ವೈದ್ಯಕೀಯ ಸಿಬ್ಬಂದಿ ಹಾಗು ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ಈ ಎಲ್ಲಾ ವಸ್ತುಗಳು ಅತ್ಯವಶ್ಯಕವಾಗಿದ್ದು, ಸುಮಾರು ೪೪ ಲಕ್ಷ ಮೊತ್ತದ ವೈದ್ಯಕೀಯ ಸಾಮಗ್ರಿಗಳನ್ನು ತುರ್ತಾಗಿ ಒದಿಸಿಕೊಟ್ಟ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿಯವರಿಗೆ, ಜಿಲ್ಲೆಯ ಜನರ ಪರವಾಗಿ ಹಾಗೂ ಸರ್ಕಾರದ ವತಿಯಿಂದ ಸಚಿವ ಶಿವರಾಮ ಹೆಬ್ಬಾರ್ ಕೃತಜ್ಞತೆ ಸಲ್ಲಿಸಿದ್ದಾರೆ

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 14-02-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?