ರಾಜ್ಯದಲ್ಲಿನ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ. ಈ ವರ್ಷ ಎಲ್ಲರನ್ನೂ ಪಾಸ್ ಮಾಡಲಾಗುತ್ತದೆ. ಆದ್ರೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಏಪ್ರಿಲ್ 14ರ ನಂತ್ರ ಶೀಘ್ರದಲ್ಲಿಯೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಫೇಸ್ ಬುಕ್ ನಲ್ಲಿ ಲೈವ್ ಮೂಲಕ ಮಾತನಾಡಿದ ಅವರು, 13-03-2020ರಂದು ಲಾಕ್ ಡೌನ್ ನಂತ್ರ, ಒಂದರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಆನಂತ್ರ 7ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಯಿತು. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಇಲ್ಲದಂತೆ ಈ ವರ್ಷ ಪಾಸ್ ಮಾಡಲಾಗುತ್ತದೆ ಎಂದು ತಿಳಿಸಿದರು.