ಬೆಂಗಳೂರು: ಜನಪ್ರಿಯ ಹಾಸ್ಯ ನಟ ಬುಲೆಟ್ ಪ್ರಕಾಶ್(44) ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರಿನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಆಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. 6 ದಿನಗಳ ಹಿಂದೆ ಕನ್ನಿಂಗ್‍ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಿಡ್ನಿ ವೈಫಲ್ಯದ ಜೊತೆಗೆ ಕಾಲಿಗೆ ಗ್ಯಾಂಗ್ರಿನ್ ಕೂಡ ಆಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಕಾರಣ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
Source: public TV