ಕುಮಟಾ :ಜಿಲ್ಲೆಯ ಪ್ರಮುಖ ಜಾತ್ರೆಗಳಲ್ಲೊಂದಾದ ಬಾಡ -ಗುಡೇಅಂಗಡಿಯ ಶ್ರೀ ಕಾಂಚಿಕಾ ಪರಮೇಶ್ವರಿ ದೇವಿಯ ಜಾತ್ರೆಯು ಕೋವಿಡ್ -19 ಕಾಯಿಲೆಯ ನಿಮಿತ್ತ ರದ್ದಾಗಿದೆ.
ಏ. 8 ಬುಧವಾರದಂದು ಬಾಡ ಜಾತ್ರೆ ನಡೆಯಬೇಕಿತ್ತು. ದೇಶದ್ಯಾಂತ ಕೊರೋನಾ ಮಹಾ ಮಾರಿ ಖಾಯಿಲೆ ತಾಂಡವವಾಡುತ್ತಿದ್ದು ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರನ್ನು ಹೈರಾಣಾಗಿಸಿದೆ. ಹೀಗಾಗಿ ಇಡೀ ದೇಶ ಲಾಕ್ ಡೌನ್ ಆಗಿದೆ. ಹೀಗಾಗಿ ಯಾವುದೇ ಸಭೆ, ಸಮಾರಂಭ, ಜಾತ್ರೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸದಂತೆ ಜಿಲ್ಲಾಧಿಕಾರಿಗಳು ಕಟ್ಟು ನಿಟ್ಟಿನ ಅದೇಶ ನೀಡಿರುವುದಲ್ಲದೆ ಜಿಲ್ಲೆಯಲ್ಲಿ 144 ಕಲಂ ಜಾರಿಯಲ್ಲಿರುವುದರಿಂದ ಏ. 8 ರಂದು ನಡೆಯಲಿದ್ದ ಬಾಡ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಕಾರಣ ಭಕ್ತಾದಿಗಳು ಸಹಕರಿಸಬೇಕು ಎಂದು ದೇವಸ್ಥಾನದ ಆಡಳಿತಾಧಿಕಾರಿಗಳಾದ ಉಪವಿಭಾಗಾಧಿಕಾರಿ ಎಂ ಅಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.