ಭಟ್ಕಳ : ತಾಲೂಕಿನಲ್ಲಿ ಕರೋನಾ ಸಂಖ್ಯೆ ಮತ್ತೆ ಏರಿದೆ 26 ವರ್ಷದ ಐದು ತಿಂಗಳ ಗರ್ಭಿಣಿ ಮಹಿಳೆಗೆ ಸೋಂಕು ಇರುವುದು ದೃಢಪಟ್ಟಿದೆ. ಈಕೆಗೆ ಇಬ್ಬರು ಮಕ್ಕಳು ಇದ್ದು, ಈಕೆಯ ಪತಿ ದುಬೈನಿಂದ ವಾಪಸ್ಸಾದವನಾಗಿದ್ದಾನೆ. ಆದರೆ, ಪತಿಯ ವರದಿ ನೆಗೆಟಿವ್ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಿವಾಣಕ್ಕೆ ಬರುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಭಟ್ಕಳದಲ್ಲಿ ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಸೊಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ.
ದುಬೈನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈಕೆಯ ಪತಿ, ಮಾರ್ಚ್ 17ರಂದು ಮುಂಬೈಗೆ ವಿಮಾನದ ಮೂಲಕ ಬಂದಿಳಿದಿದ್ದ. ಮುಂಬೈನಲ್ಲಿ ಸುಮಾರು ನಾಲ್ಕು ದಿನ ಉಳಿದಿದ್ದ ಈತ, ಆನಂತರ ರೈಲಿನಲ್ಲಿ ಭಟ್ಕಳಕ್ಕೆ ಬಂದಿದ್ದ. ಭಟ್ಕಳ ರೈಲು ನಿಲ್ದಾಣದಿಂದ ಸ್ನೇಹಿತನ ಬೈಕ್ ನಲ್ಲಿ ಮನೆಗೆ ತೆರಳಿದ್ದ.