ಯಲ್ಲಾಪುರ : ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೊನಾ ಸೋಂಕು ನಿವಾರಣೆಗೆ ಜಿಲ್ಲೆಗಳಲ್ಲಿ ಇದ್ದು ಜಿಲ್ಲಾಡಳಿತದೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇಮಕ ಮಾಡಿದ್ದಾರೆ.
ಶಶಿಕಲಾ ಜೊಲ್ಲೆ ಅವರನ್ನು ಉತ್ತರ ಕನ್ನಡದಿಂದ ವಿಜಯಪುರಕ್ಕೆ ವರ್ಗಾವಣೆ ಮಾಡಲಾಗಿದ್ದು ಆ ಸ್ಥಾನವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ನೀಡಲಾಗಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆಲುವನ್ನ ಪಡೆದ ನಂತರ ಹಲವು ದಿನಗಳ ನಂತರದ ಪ್ರಾಯಾಸದ ನಂತರ ಶಿವರಾಮ್ ಹೆಬ್ಬಾರ್ ರವರಿಗೆ ಸಚಿವ ಸ್ಥಾನ ಸಿಕ್ಕಿತ್ತು.
ಜಿಲ್ಲಾ ಉಸ್ತುವಾರಿ ಮೇಲೆ ಹೆಬ್ಬಾರ್ ಕಣ್ಣಿಟ್ಟಿದ್ದರೂ ಈ ಹಿಂದೆ ಇದ್ದ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆಯನ್ನು ಬದಲಿಸುವ ಮನಸ್ಸು ಮಾಡಿರಲಿಲ್ಲ ಸಿಎಂ.
ಇನ್ನು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಿವರಾಮ್ ಹೆಬ್ಬಾರ್ ನಡುವೆ ಮುಸುಕಿನ ಗುದ್ದಾಟ ಸಹ ನಡೆಯುತ್ತಿತ್ತು ಎನ್ನಲಾಗಿದೆ.