ದೇಶವನ್ನು ಸಂಕಷ್ಟಕ್ಕೆ ದೂಡಿರುವ COVID 19 ಸೋಂಕಿನ ಕುರಿತಂತೆ ದೇಶದ ಹೋರಾಟಕ್ಕೆ ಕೈ ಜೋಡಿಸಿರುವ ಡಾ. ಶಶಿಭೂಷಣ ಹೆಗಡೆ ಅವರು ವೈಯಕ್ತಿಕವಾಗಿ ಪ್ರಧಾನ ಮಂತ್ರಿ ಕೇರ್ ನಿಧಿಗೆ ಎರಡು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಅಲ್ಲದೇ ತಮ್ಮ ಸ್ವಾಮ್ಯದ ಜಿಲ್ಲೆಯ ಏಕೈಕ ಆಯುರ್ವೇದ ಆಸ್ಪತ್ರೆ ಮತ್ತು ಮಹಾವಿದ್ಯಾಲಯವಾದ ಸಿದ್ದಾಪುರದ ಧನ್ವಂತರಿ ಆಯುರ್ವೇದ ಆಸ್ಪತ್ರೆಯನ್ನು COVID 19 ಎದುರಿಸಲು Master Training center ಎಂದು ಗುರುತಿಸಿ ಆಸ್ಪತ್ರೆಯ ಸಿಬ್ಬಂದಿ , ವೈದ್ಯರು , ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು ಕರೊನ ಸಾಂಕ್ರಾಮಿಕ ರೋಗವನ್ನು ಎದುರಿಸಲು ಆಸ್ಪತ್ರೆ , ಸಿಬ್ಬಂದಿಗಳನ್ನು ಬಳಸಿಕೊಳ್ಳುವಂತೆ ಸರ್ಕಾರಕ್ಕೆ ತಿಳಿಸಿದ್ದಾರೆ .
ಈ ವಿಷಮ ಸಂದರ್ಭದಲ್ಲಿ ಜನತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರ್ಕಾರದೊಂದಿಗೆ ಸಹಕರಿಸುವಂತೆ ವಿನಂತಿಸಿದ್ದಾರೆ .