ಕಾರವಾರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೋವಿಡ್ 19 ಸೋಂಕಿತ ಚಿಕಿತ್ಸೆಗಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿನ ಔಷದ ಶೇಖರಣಾ ಕೊಠಡಿಗೆ ಭೇಟಿ ನೀಡಿ ಸಂಗ್ರಹವಿರುವ ಔಷಧಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಪರಿಕರಗಳನ್ನು ಖರೀದಿ ಮಾಡುವಂತೆ ಅವರು ತಿಳಿಸಿದರು.