ಇಂದು ಅಂಕೋಲಾ,ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಕೋವಿಡ್ ಹಾಗೂ ಮಂಗನಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳ ಬಳಿ ಉ.ಕ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಮಾಹಿತಿ ಪಡೆದರು.
ಕರಾವಳಿ ಪ್ರದೇಶದಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆಯ ಪರಿಹಾರದ ಕುರಿತು ಅಧಿಕಾರ ಹಾಗೂ ಶಾಸಕರ ಜೊತೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಅಂಕೋಲಾದ ಹಾಗೂ ಭಟ್ಕಳದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳ ಜೊತೆಯಲ್ಲಿ ಚರ್ಚಿಸಲಾಯಿತು.