ಹೊನ್ನಾವರ :ಚೆಂಡೆಯ ಗಂಡುಗಲಿ ಕ್ರಷ್ಣ ಯಾಜಿ ಇಡಗುಂಜಿ ನಮ್ಮೆಲ್ಲರನ್ನೂ ಅಗಲಿದ್ದಾರೆ. ಅವರು ಇಂದು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು ಎಂದು ವರದಿಯಾಗಿದೆ.

ಇಡಗುಂಜಿ ಕೃಷ್ಣ ಯಾಜಿ ಯಕ್ಷಗಾನ ಲೋಕದಲ್ಲಿ ಚಂಡೆ ವಾದಕರಾಗಿ ಪ್ರಸಿದ್ಧಿ ಪಡೆದವರಾಗಿದ್ದಾರೆ. ಹೊನ್ನಾವರ ತಾಲೂಕಿನ ಇಡಗುಂಜಿಯ ಕೃಷ್ಣ ಯಾಜಿ ಅವರದು ಐದು ದಶಕಗಳಿಂದ ಯಕ್ಷಗಾನ ಕಲಾಸೇವೆ. ವೇಷಧಾರಿಯಾಗಿ ಯಕ್ಷ ರಂಗಕ್ಕೆ ಕಾಲಿಟ್ಟ ಇಡಗುಂಜಿ ಕೃಷ್ಣ ಯಾಜಿ ಅವರು ನಂತರದಲ್ಲಿ ಹೆಸರು ಮಾಡಿದ್ದು ಚಂಡೆ ವಾದಕರಾಗಿ.

RELATED ARTICLES  ಚಂದ್ರಮೌಳೀಶ್ವರ ದೇವಾಲಯ ಆವರಣದಲ್ಲಿ ಶ್ರಮಾದಾನ

ಯಕ್ಷಗಾನಕ್ಕಷ್ಟೇ ಸೀಮಿತವಾದ ಚಂಡೆಯನ್ನು ನಾಟಕರಂಗಕ್ಕೂ ವಿಸ್ತರಿಸುವ ಮೂಲಕ ಹೊಸ ಪ್ರೇಕ್ಷಕರನ್ನು ಕೃಷ್ಣ ಯಾಜಿ ತಲುಪಿದ್ದಾರೆ. ಇತ್ತೀಚಿನ ಆವಿಷ್ಕಾರವಾದ ಶತಾವಧಾನಿ ಡಾ.ಆರ್. ಗಣೇಶ್ ಅವರ ನಿರ್ದೇಶನದ ಭಾಮಿನಿ ಹಾಗೂ ಕೃಷ್ಣಾರ್ಪಣ ಕಾರ್ಯಕ್ರಮಗಳಿಗೆ ಚಂಡೆವಾದನದ ವಿಶೇಷ ಛಾಪು ಮೂಡಿಸಿದ ಹಿರಿಮೆ ಕೃಷ್ಣ ಯಾಜಿ ಅವರದು. ಗೋಪಾಲಕೃಷ್ಣ ಹೆಗಡೆ ನೇತೃತ್ವದ ‘ಲಯಲಾಸ್ಯ’ ಕಾರ್ಯಕ್ರಮದಲ್ಲಿ ತಬಲಾ ಮತ್ತು ಮೃದಂಗಗಳೊಂದಿಗೆ ಚಂಡೆವಾದನದ ವಿಭಿನ್ನ ಆಯಾಮ, ಪಟ್ಟು ಮತ್ತು ಪೆಟ್ಟುಗಳ ಪ್ರದರ್ಶನ ನೀಡಿದ್ದು ಮಹತ್ವಪೂರ್ಣವೆನಿಸಿದೆ.

RELATED ARTICLES  ಶರಾವತಿ ಪತ್ತಿನ ಸಹಕಾರಿ ಬ್ಯಾಂಕ್ ಹೊನ್ನಾವರ ಇದರ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಾಶಯ ಕೋರಿದ ಶ್ರೀ ಕೇಶವ ಗೌಡ