ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ರಾಜ್ಯದ ಕಾರ್ಮಿಕರ ರಕ್ಷಣೆಗಾಗಿ ಕಾರ್ಮಿಕ ಇಲಾಖೆಯು ಸ್ಥಾಪಿಸಿರುವ ಸಹಾಯವಾಣಿಗೆ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಜೊತೆಯಲ್ಲಿ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು.
ಹೊರರಾಜ್ಯದಲ್ಲಿ ಸಿಲುಕಿರುವ ಕಟ್ಟಡ ಹಾಗೂ ಇತರೆ ಕಾರ್ಮಿಕರು 080 22636800 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಯನ್ನು ತಿಳಿಸಬಹುದು, ಕರೆ ತಂದ ತಕ್ಷಣ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಯನ್ನು ಸಂಪರ್ಕಿಸಿ, ತಮ್ಮ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಹೆಬ್ಬಾರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಮೊದಲಾದವರು ಉಪಸ್ಥಿತರಿದ್ದರು.