ಕುಮಟಾ: ತಾಲೂಕಿನ ಗೋಕರ್ಣದಲ್ಲಿ ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ್ದನೆನ್ನಲಾದ ಆರೋಪಿಯನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ.

ಗೋಕರ್ಣದ ದುಬ್ಬನಸಸಿ ಮೂಲದ 28 ವರ್ಷದ ಮಂಜುನಾಥ ನಾರಾಯಣ ಬಾಂದೇಕರ 14 ವರ್ಷದ ಬಾಲಕಿಯೊಬ್ಬಳನ್ನು ಫುಸಲಾಯಿಸಿ, ಅತ್ಯಾಚಾರ ನಡೆಸಿ, 6 ತಿಂಗಳ ಗರ್ಭಿಣಿಯಾಗುವಂತೆ ಮಾಡಿದ್ದಾನೆ ಎನ್ನಲಾಗಿದೆ.

RELATED ARTICLES  ರೈಲಿಗೆ ಸಿಲುಕಿ ವ್ಯಕ್ತಿ ಸಾವು

ಈ ಕುರಿತು ಬಾಲಕಿಯ ತಂದೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಸ್ಕೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

RELATED ARTICLES  ಪರೇಶ್ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ ವಾಪಸ್..!