ಕುಮಟಾ: 2018-19 ನೆಯ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನಾಲ್ವರು ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ತಲಾ 5 ಸಾವಿರ ರೂ.ಗಳ ಚೆಕ್‍ನ್ನು ಶಾಸಕ ದಿನಕರ ಶೆಟ್ಟಿಯವರ ಮೂಲಕ ವಿತರಿಸಲಾಯಿತು.
ತಾಲೂಕಿನ ಚಿತ್ರಗಿಯ ಮಹಾತ್ಮಾಗಾಂಧಿ ಪ್ರೌಢಶಾಲೆಯ ಐಶ್ವರ್ಯ, ಮಾಡರ್ನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ಅಪೇಕ್ಷಾ, ಸಿವಿಎಸ್‍ಕೆ ಪ್ರೌಢಶಾಲೆಯ ಗುರುಮೂರ್ತಿ ಹೆಗಡೆ, ನಿರ್ಮಲಾ ಕಾನ್ವೆಂಟ್‍ನ ಸಚಿನ ನಾಯ್ಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದರು. ಈ ನಾಲ್ವರು ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ತಲಾ 5 ಸಾವಿರ ರೂ.ಗಳ ಚೆಕ್‍ನ್ನು ವಿತರಿಸಿ, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ, ಚಿತ್ರಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎನ್.ಆರ್.ಗಜು, ಸಿವಿಎಸ್‍ಕೆ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಸುಮಾ ಪ್ರಭು, ಮಾಡರ್ನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ಶಿಕ್ಷಕ ಬಿಎಸ್ ಗೌಡ ಸೇರಿದಂತೆ ಇನ್ನಿತರರು ಇದ್ದರು.