ಬೆಂಗಳೂರು: ನಕಲಿ ಅಶ್ಲೀಲ ಸಿ.ಡಿ. ತಯಾರಿಸಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳ ಮಾನಹಾನಿಗೆ ಪ್ರಯತ್ನಿಸಿದ್ದ ಪ್ರಕರಣದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್‍ನ ಧಾರವಾಡ ಪೀಠ ವಜಾ ಮಾಡಿದೆ.
ಪ್ರಕರಣದ ವಿಚಾರಣೆಯನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸುವಂತೆ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಸೂಚನೆ ನೀಡಿದ್ದಾರೆ.
ಪರಮಪೂಜ್ಯರ ತೇಜೋವಧೆ ಮಾಡುವ ಉದ್ದೇಶದಿಂದ ದುಷ್ಟಕೂಟ ಕಟ್ಟಿಕೊಂಡು ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಗಳ ತೇಜೋವಧೆ ಪ್ರಯತ್ನ 2010ರಲ್ಲಿ ನಡೆದಿತ್ತು.

RELATED ARTICLES  ಹಿರಿಯ ನಟಿ ಬಿ.ವಿ. ರಾಧಾ ಹೃದಯಾಘಾತದಿಂದ ನಿಧನ

ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಶ್ರೀಗಳ ಹಾವಭಾವವನ್ನು ಆತನಿಗೆ ಕಲಿಸಿ ಚಿತ್ರೀಕರಿಸಲಾಗಿತ್ತು. ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ವಿಡಿಯೊ ಜತೆ ಸೇರಿಸಿ ಅದನ್ನು ಮಾಧ್ಯಮ ಹಾಗೂ ಸಆಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ಕುತಂತ್ರವನ್ನು ರೂಪಿಸಲಾಗಿತ್ತು.
ಶ್ರೀಮಠ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿತು. ಹಿರಿಯ ಪೊಲೀಸ್ ಅಧಿಕಾರಿ ಗೋಪಾಲ ಹೊಸೂರ್ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ರೆಡ್‍ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದರು. ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದ್ದು, ಪ್ರಸ್ತುತ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯ ಜಾರ್ಚ್ ಫ್ರೇಮ್ ಮಾಡುವ ಹಂತದಲ್ಲಿದೆ. ಆರೋಪಿಗಳು ಕಲಾಪಕ್ಕೆ ಹಲವು ಬಾರಿ ಗೈರುಹಾಜರಾಗಿ ತಮ್ಮ ವಿರುದ್ಧದ ಮೊಕದ್ದಮೆ ವಿಚಾರಣೆಗೆ ತಡೆ ನೀಡಿ, ಪ್ರಕರಣ ವಜಾಗೊಳಿಸುವಂತೆ ಧಾರವಾಡ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

RELATED ARTICLES  ಇಂದಿನ ಉತ್ತರಕನ್ನಡದ ಕೊರೋನಾ ಅಪ್ಡೇಟ್


ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ತಂತ್ರಜ್ಞಾನ ಬಳಸಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಆದೇಶ ನೀಡಿದರು.