ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ  ಕೆಲ ಆರೋಪಿ ಮುಖಂಡರನ್ನು ರಕ್ಷಿಸುವುದಕ್ಕಾಗಿಯೇ ಸಾಕ್ಷ್ಯ ನಾಶಪಡಿಸಲಾಗಿದ್ದು, ಇದರ ನೈತಿಕ ಹೊಣೆ ಹೊತ್ತು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಗಣಪತಿ ಅವರ ಮೊಬೈಲಿನಲ್ಲಿನ ಕೆಲ ಮಾಹಿತಿಗಳನ್ನು ಡಿಲೀಟ್ ಮಾಡಲಾಗಿದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ನಿನ್ನೆಯಷ್ಟೇ ವರದಿ ನೀಡಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಈ ತನಿಖೆಗಳನ್ನು ತನ್ನ ಮೂಗಿನ ನೇರಕ್ಕೆ ತನಿಖೆ ನಡೆಸಲು, ಸರ್ಕಾರ ಎಸಿಬಿ, ಸಿಐಡಿಯಂಥ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ, ಗಣಪತಿ ಆತ್ಮಹತ್ಯೆ ಕೇಸನ್ನು ಮುಚ್ಚಿಹಾಕಲು, ಸರ್ಕಾರ ಮತ್ತು ಹಿರಿಯ ಅಧಿಕಾರಿಗಳು ಸಂಚು ನಡೆಸಿದ್ದಾರೆ ಎಂದು ದೂರಿದ್ದಾರೆ.

RELATED ARTICLES  ಆಧಾರ್ ಜೋಡಣೆಗೆ ಮಾರ್ಚ್ 31, 2018 ರವರೆಗೆ ಗಡುವು ವಿಸ್ತರಣೆ

ಸಾಕ್ಷ್ಯ ನಾಶವಾಗುವಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರ ಪಾತ್ರವಿದೆ ಎಂದು ಆರೋಪಿಸಿದ ಮಾಜಿ ಸಿಎಂ, ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲಿ ಮೂರು ಸುತ್ತು ಗುಂಡು ಹಾರಿರುವ ಬಗ್ಗೆ ಯಾರೂ ಸ್ಪಷ್ಟನೆ ನೀಡುತ್ತಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅವರು ಆಗ್ರಹಿಸಿರುವ ಅವರು, ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರ ಜತೆಯೂ ಚರ್ಚಿಸುದಾಗಿ ಹೇಳಿದ್ದಾರೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 13-04-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಆತ್ಮಹತ್ಯೆಗೂ ಮುನ್ನ, ಗಣಪತಿ ಅವರು ಆಗಿನ ಗೃಹ ಸಚಿವ ಜಾರ್ಜ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಹೀಗಾಗಿ ಜಾರ್ಜ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೆಕೆಂದು ಒತ್ತಾಯಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ.