ಭಟ್ಕಳ : ಕಳೆದ ಎರಡು ಮೂರು ದಿನದಿಂದ ಕೊರೋನಾ ಪಾಸಿಟಿವ್ ಪ್ರಕರಣ ಇಲ್ಲದೆ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದ ಭಟ್ಕಳದಲ್ಲಿ ಇಂದು ಮತ್ತೊಂದು ಪ್ರಕರಣ ಪಾಸಿಟಿವ್ ಬಂದಿದ್ದು ಮತ್ತೆ ಜನರನ್ನು ಭಯದ ಗೂಡಿಗೆ ತಳ್ಳಿದೆ.

ಕೊರೋನಾ ‌ಸೋಂಕಿನ ಶಂಕೆಯ ಮೇಲೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದವರ ಪೈಕಿ ಒಬ್ಬರಲ್ಲಿ ಕೊರೋನಾ ಸೋಂಕು ಇರುವುದು ಇದೀಗ ದೃಢಪಟ್ಟ ಬಗ್ಗೆ ವರದಿಗಳು ಬಂದಿವೆ.

RELATED ARTICLES  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಯದ ವಿದ್ಯಾರ್ಥಿನಿಯರಿಗೆ ಕರಾಟೆ ತರಗತಿ ಪ್ರಾರಂಭ.

ಭಟ್ಕಳದ ಎರಡು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸೋಂಕಿತ ತಾಯಿಯೊಂದಿಗೆ ಸಂಪರ್ಕದಲ್ಲಿದ್ದ ಕಾರಣ ಮಗುವಿನಲ್ಲೂ ಸೋಂಕು ದೃಢಪಟ್ಟಿದೆ.

ಭಟ್ಕಳದಲ್ಲಿ ಒಂದೇ ದಿನ 12 ಜನರಿಗೆ ಕೊರೋನಾ ಸೋಂಕು ದೃಢಪಟ್ಟು ಈ ಹಿಂದೆ ಭಯ ಹುಟ್ಟಿಸಿತ್ತು, ಅವರ ಸಂಪರ್ಕದಲ್ಲಿದ್ದ ಸುಮಾರು 60 ಜನರ ಗಂಟಲು ದ್ರವದ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

RELATED ARTICLES  ಗಾಯಕಿ ಲತಾ ಮಂಗೇಶ್ಕರ್ ನಿಧನ

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇರುವುದು ಇದೀಗ ಭಟ್ಕಳ ಮಾತ್ರವಲ್ಲ, ಇಡೀ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಜನತೆಯ ಎದೆಯಲ್ಲಿ ಡವಡವ ಶುರುವಾಗಿದೆ.