ಕುಮಟಾ: ತಾಲೂಕಿನ ಕಲಭಾಗ ಗ್ರಾ.ಪಂ ವ್ಯಾಪ್ತಿಯ ಅಳ್ವೇಕೋಡಿ ಹಂಟಿಮಠದ ಜನತಾ ಕಾಲೋನಿಗೆ 2019-20 ನೆಯ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಮಂಜೂರಾದ 10 ಲಕ್ಷ ರೂ.ವೆಚ್ಚದ ಕಾಂಕ್ರಿಟ್ ರಸ್ತೆಯ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರನಿಗೆ ಸೂಚಿಸಿದರು.
ನಂತರ ಮಾತನಾಡಿದ ಅವರು, ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರ ಲಾಕ್‍ಡೌನ್ ಘೋಷಿಸಿರುವುದರಿಂದ ರಸ್ತೆ ಕಾಮಗಾರಿಯಲ್ಲಿ ಸ್ವಲ್ಪ ವಿಳಂಭವಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಅಲ್ಲದೇ, ಉತ್ತಮ ಗುಣಮಟ್ಟದ ಕಾಂಕ್ರಿಟ್ ರಸ್ತೆಯನ್ನು ನಿರ್ಮಿಸಿಕೊಳ್ಳುವಲ್ಲಿ ಸ್ಥಳೀಯರು ಮುತುವರ್ಜಿವಹಿಸಬೇಕು ಎಂದರು.