ಬೆಂಗಳೂರು: ಕೋವಿಡ್-೧೯ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ ೨೫ರಿಂದ ಜುಲೈ ೪ ರವರೆಗೆ, ದ್ವೀತಿಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ ೧೮ರಂದು ನಡೆಸಲು ತಿರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಪ್ರೌಡ ಶಿಕ್ಷಣ ಸಚೀವರಾದ ಸುರೇಶ ಕುಮಾರ ಇಂದು ಪ್ರಕಟಿಸಿದ್ದಾರೆ. ಎಸ್.ಎಸ್.ಎಲ್.ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊ0ದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು ೧೦ ದಿನದಲ್ಲಿ ಮುಗಿಯಲಿದೆ ಎಂದರು.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ೨೮೭೯ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಿದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು. ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದರು.
ಮೊರಾರ್ಜಿ ದೇಸಾಯಿ ಶಾಲೆ, ಎಸ್.ಸಿ,ಎಸ್.ಟಿ ಹಾಸ್ಟಲ್‌ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದರು. ಕರೋನಾ ಸುರಕ್ಷತೆಗಾಗಿ ಮುಂದುಡಲಾಗಿದ್ದ ಪರಿಕ್ಷೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದು ಇಲಾಖೆ ವಿವಿಧ ರೀತಿಯಲ್ಲಿ ಸಜ್ಜಾಗಲಿದೆ ಎಂದರು

RELATED ARTICLES  ಕಾಳು ಮೆಣಸಿನ ರಾಣಿಯ ಥೀಮ್ ಪಾರ್ಕ ನಿರ್ಮಾಣದ ಬಗ್ಗೆ ಸ್ಥಳ ವೀಕ್ಷಣೆ ನಡೆಸಿದ ವೀರೇಂದ್ರ ಹೆಗ್ಗಡೆ.