ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರಥಮ ಹಾಗೂ ದ್ವಿತೀಯ ಪದವಿ ತರಗತಿಗಳಿಗೆ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್, ದೇಶದ 45 ಸಾವಿರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೊದಲ ಮತ್ತು ದ್ವಿತೀಯ ಪದವಿ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ ಪದವಿ ಅಂತಿಮ ವರ್ಷದ ಪರೀಕ್ಷೆಯನ್ನು ಮಾತ್ರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ವರ್ಷದ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಸಾಧನೆ ಹಾಗೂ ಹಿಂದಿನ ಶೈಕ್ಷಣಿಕ ದಾಖಲೆಗಳನ್ನು ಆಧರಿಸಿ 2 ನೇ ವರ್ಷಕ್ಕೆ ತೇರ್ಗಡೆ ಮಾಡಲಾಗುವುದು. ಕಳೆದ ಸೆಮಿಸ್ಟರ್ ನಲ್ಲಿ ಅಥವಾ ವರ್ಷ ಮತ್ತು ಇಂಟರ್ನಲ್ ಪರೀಕ್ಷೆಯಲ್ಲಿ ಶೇ. 50 ರಷ್ಟು ಅಂಕ ಗಳಿಸಿರುವ 2 ನೇ ವರ್ಷದ ವಿದ್ಯಾರ್ಥಿಗಳಿಗೆ ಅಂತಿಮ ವರ್ಷಕ್ಕೆ ತೇರ್ಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.