ಕುಮಟಾ : ತಾಲೂಕಿನ ಕತಗಾಲ ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಉತ್ತರಕನ್ನಡ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಸಭೆ ನಡೆಸಿ ಯೋಜನೆಯ ಸಾಧಕ – ಭಾದಕಗಳ ಕುರಿತು ಚರ್ಚಿಸಿದರು.
ಶಾಸಕರಾದ ದಿನಕರ ಶೆಟ್ಟಿಯವರು ಪಿಕ್ ಅಪ್ ಡ್ಯಾಂ ನಿರ್ಮಾಣದ ಬಗ್ಗೆ ತಿಳಿಸಿದರು. ನಂತರ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ನಡೆಯಲ್ಲಿರುವ ಉಪ್ಪಿನ ಪಟ್ಟಣ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಯ ಸ್ಥಳ ಪರಿಶೀಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ದಿನಕರ ಕೆ ಶೆಟ್ಟಿ, ಜಿಲ್ಲಾ ಪಂಚಾಯತ, ತಾಲೂಕಾಪಂಚಾಯತ, ಗ್ರಾಮಪಂಚಾಯತ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.