ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಘನಾಶಿನಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ಅಘನಾಶಿನಿಯ ನದಿಯಲ್ಲಿ ಮಳೆನೀರು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.
ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಳೆ ಗುಡುಗು, ಸಿಡಿಲುಗಳಿಂದ ಆರ್ಭಟಿಸುತ್ತ ಸುರಿಯುತ್ತಿದೆ. ತಾಲೂಕಿನ ಹಲವು ಭಾಗಗಳಲ್ಲಿ ಮಳೆ ಸುರಿದಿರುವುದು ವರದಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬಿದ್ದಿರುವ ಮಳೆಯು ರೈತರಲ್ಲಿ ಹರ್ಷ ತರಿಸಿದೆ. ಕೃಷಿಯು ಚಟುವಟಿಕೆಗೆ ಚಾಲನೆ ಸಿಕ್ಕಿದೆ.