ಶಿರಸಿಯ : ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಮನೆ-ಮನೆ ಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕರು ನರೇಂದ್ರ ಮೋದಿ ಸರ್ಕಾರದ ಎರಡನೆಯ ಅವಧಿಯ ಮೊದಲ ವರ್ಷದ ಸಾಧನೆಗಳನ್ನು ತಿಳಿಸುವ ಕರಪತ್ರ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜನತೆಗೆ ಬರೆದಿರುವ ಪತ್ರ ಈ ಎರಡೂ ಪ್ರತಿಗಳನ್ನು ಕಾರ್ಯಕರ್ತರು ಮನೆ-ಮನೆಗೆ ತಲುಪಿಸಲಿದ್ದಾರೆ ಎಂದರು.
ಕೋವಿಡ್-19 ಹಿನ್ನೆಲೆಯಲ್ಲಿ ಮನೆ-ಮನೆಗಳಿಗೆ ತೆರಳುವಾಗ ಸಾಮಾಜಿಕ ಅಂತರದ ಪಾಲನೆಯಾಗಬೇಕು, ಕಾರ್ಯಕರ್ತರು ಕಡಿಮೆ ಸಂಖ್ಯೆಯಲ್ಲಿ ತೆರಳಿ ಎಲ್ಲಾ ಮನೆಗಳನ್ನು ಸಂಪರ್ಕ ಮಾಡಬೇಕು ಎಂದು ಸೂಚನೆ ನೀಡಿದರು.
ಆತ್ಮ ನಿರ್ಭರ ಭಾರತ ಅಭಿಯಾನದ ಕುರಿತಾಗಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಗೋವಿಂದ ನಾಯ್ಕರು ಪರೋಕ್ಷ ಸಮಾವೇಶ (Virtual Rally) ಗಳ ಮೂಲಕ ಜನರನ್ನು ತಲುಪೋಣ ಎಂದರು. ರಾಜ್ಯ ಹಾಗೂ ವಿಭಾಗ ಮಟ್ಟದಲ್ಲಿ ನಡೆಯುವ ಫಲಾನುಭವಿಗಳ ಪರೋಕ್ಷ ಸಮಾವೇಶಕ್ಕೆ (Virtual Rally) ಸೂಕ್ತ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ, ಪ್ರಧಾನ ಕಾರ್ಯದರ್ಶಿ ಶ್ರೀ ಗೋವಿಂದ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ರೇಖಾ ಅಂಡಗಿ, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಗುರುಪ್ರಸಾದ ಹೆಗಡೆ, ಕೋಶಾಧ್ಯಕ್ಷರಾದ ಶ್ರೀ ಶ್ರೀಕಾಂತ ನಾಯ್ಕ, ಮಂಡಲ ಅಧ್ಯಕ್ಷರಾದ ಶ್ರೀ ರಾಜೇಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಶಿರಸಿ ನಗರ ಮಂಡಲದ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ನಂತರ ನಾಡಿಗಗಲ್ಲಿಯ ಕೆಲವು ಮನೆಗಳಿಗೆ, ಅಂಗಡಿಗಳಿಗೆ ತೆರಳಿ ಕರಪತ್ರ ನೀಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.