ಕಾರವಾರ : ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆಯಲ್ಲಿ ಹೆಸ್ಕಾಂ ಅಧಿಕಾರಿಗಳ ಸಭೆ ನಡೆಯಿತು.
ವಿದ್ಯುತ್ ಎಲ್ಲರಿಗೂ ಅವಶ್ಯಕತೆ ಇದ್ದು, ಗ್ರಾಮೀಣ ಪ್ರದೇಶದಲ್ಲಿ ಕಾಮಗಾರಿ ಹೆಸರಿನಲ್ಲಿ ವಾರಗಟ್ಟಲೇ ವಿದ್ಯುತ್ ಕಡಿತ ಮಾಡಬಾರದು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಪಿಎಲ್ ಕುಟುಂಬಕ್ಕೆ ದೀನದಯಾಳ ಹಾಗೂ ಸೌಭಾಗ್ಯ ಯೋಜನೆಯಲ್ಲಿ ವಿದ್ಯುತ್ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಸಂಸದ ಹೆಗಡೆ ಹೇಳಿದರು.
ಸಭೆಯಲ್ಲಿ ಕಾರವಾರ ಶಾಸಕಿ ರೂಪಾಲಿ ನಾಯ್ಕ್, ಭಟ್ಕಳ ಶಾಸಕ ಸುನಿಲ್ ನಾಯ್ಕ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾಧಿಕಾರಿ ಡಾ. ಕೆ ಹರೀಶ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಒ ಎಂ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು,ಹೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.