ಭಟ್ಕಳ: ತಾಲೂಕಿನ ಯಲ್ವಡಿಕವೂರ್ ಪಂಚಯತ್ ವ್ಯಾಪ್ತಿಯ ಮುಗ್ಲಿಹೊಂಡಾದ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ವಿದ್ಯಾ ಅಣ್ಣಪ್ಪ ನಾಯ್ಕ ಎಂಬುವವರೇ ಆತ್ಮಹತ್ತೆಗೆ ಶರಣಾದ ಮಹಿಳೆ ಎಂದು ಗುರುತಿಲಾಗಿದೆ. ಪತಿ ಮತ್ತು ಇಬ್ಬರು ಪುತ್ರರನ್ನು ಹೊಂದಿರುವ ಇವರು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಡಿಕೊಂಡಿರಬಹುದೆಂದು ಶಂಕಿಸಲಾಗಿದೆ.