ಹುಬ್ಬಳ್ಳಿ: ವಿಶ್ವದಾದ್ಯಂತ ಆತಂಕ ಮೂಡಿಸಿರುವ ಡೆಡ್ಲಿ ಬ್ಲೂವೇಲ್ ಗೇಮ್ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ.
ಹುಬ್ಬಳ್ಳಿಯ ರಾಜನಗರದಲ್ಲಿ ಬ್ಲೂವೇಲ್ ಗೇಮ್ ಆಡುತ್ತಾ 11 ವರ್ಷದ ಪೋರಿ ಬೆರಳು ಕುಯ್ದುಕೊಂಡಿರುವ ಘಟನೆ ನಡೆದಿದೆ. ಇನ್ನು ಬೆರಳು ಕುಯ್ದುಕೊಂಡು ಹಾಗೇ ವಿದ್ಯಾರ್ಥಿನಿ ಶಾಲೆಗೆ ಬಂದಿದ್ದು ಇದನ್ನು ಗಮನಿಸಿದ ವಿದ್ಯಾರ್ಥಿನಿಯ ಗೆಳೆಯರು ಶಾಲಾ ಶಿಕ್ಷಕರ ಗಮನಕ್ಕೆ ತಂದಿದ್ದಾರೆ.
ಕೂಡಲೇ ಶಿಕ್ಷಕರು ವಿದ್ಯಾರ್ಥಿನಿಯನ್ನು ಕರೆಸಿ ಕೌನ್ಸಿಲಿಂಗ್ ನಡೆಸಿದಾಗ ತಾನು ಮನೆಯಲ್ಲಿ ಬ್ಲೂವೇಲ್ ಗೇಮ್ ಆಡುತ್ತಾ ಬೆರಳು ಕುಯ್ದುಕೊಂಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಇದರಿಂದ ಆತಂಕಗೊಂಡ ಶಿಕ್ಷಕರು ಕೂಡಲೇ ವಿದ್ಯಾರ್ಥಿನಿಯ ಪೋಷಕರನ್ನು ಕರೆಸಿ ಬ್ಲೂವೇಲ್ ಗೇಮ್ ಅವಂತರಗಳ ಬಗ್ಗೆ ಮಾಹಿತಿ ನೀಡಿದ್ದರು.
ಇನ್ನು ಬ್ಲೂವೇಲ್ ಗೇಮ್ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಪ್ರಾಂಶುಪಾಲರು ಪೋಷಕರ ಸಭೆ ಕರೆಯಲು ನಿರ್ಧರಿಸಿದ್ದಾರೆ.
RELATED ARTICLES  ಮಂಗಳವಾರ ಮಾರುಕಟ್ಟೆ ಆರಂಭದಲ್ಲೇ 233 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್, ಬ್ಯಾಂಕಿಂಗ್ ಕ್ಷೇತ್ರಕ್ಕೆ ಲಾಭ