ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಅದರಂತೆ ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ, ಜುಲೈ 5ರಿಂದ ಪ್ರತಿ ಭಾನುವಾರ ಲಾಕ್ ಡೌನ್ ಮಾಡಲು ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.
ಇನ್ನು ಸರ್ಕಾರಿ ನೌಕರರೂ ಕೊರೋನಾಗೆ ತುತ್ತಾಗುತ್ತಿರುವುದರಿಂದ ಮುಂದಿನ ವಾರದಿಂದ 5 ದಿನ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ನಿರ್ವಹಿಸಲಿವೆ.