ಕುಮಟಾ : ಕೋವಿಡ್ 19 (ಕೋರೋನ) ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸಲು ,ಭಾನುವಾರ ಔಷಧಿ ಅಂಗಡಿ ಹೊರತುಪಡಿಸಿ ಎಲ್ಲಾ ರೀತಿಯ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಹೊರಡಿಸಲಾಗಿದ್ದ ಭಾನುವಾರ ಕರ್ಫ್ಯೂಗೆ ಉತ್ತರಕನ್ನಡದ ಕುಮಟಾ ದಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಜನತಾ ಕರ್ಫ್ಯೂ ಮಾದರಿ ಲಾಕ್‌ಡೌನ್ ಇದಾಗಿದ್ದು, ಆಟೋ, ಟ್ಯಾಕ್ಸಿ, ಬಸ್ ಸಂಚಾರ ಸಂಪೂರ್ಣ ಸ್ಥಗಿತ ತುರ್ತು ಸೇವೆ ಹೊರತುಪಡಿಸಿ ಇತರೆ ಎಲ್ಲಾ ವ್ಯವಸ್ಥೆಗಳೂ ಬಂದ್ ಆಗಿವೆ.

RELATED ARTICLES  ರಿಯಲ್ ಎಸ್ಟೇಟ್ ನಿಯಂತ್ರಣ ಕಾಯಿದೆ (RERA) ಜಾರಿಯಲ್ಲಿ ಕರ್ನಾಟಕ ದೇಶದಲ್ಲಿಯೇ 2ನೇ ಸ್ಥಾನ.

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಸೂಚನೆ ನೀಡಿದ್ದು, ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಈಗಾಗಲೇ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಸುಖಾಸುಮ್ಮನೆ ಮನೆಯಿಂದ ಹೊರಬಂದರೆ ಮುಲಾಜಿಲ್ಲದೆ ಪೊಲೀಸರು ಕೇಸ್ ದಾಖಲಿಸಿ ದಂಡ ವಿಧಿಸಲಿದ್ದಾರೆ. ಸರಕು ಸಾಗಣಿ ಮತ್ತು ತುರ್ತು ಸೇವೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರಲಿದೆ.

RELATED ARTICLES  ನಾಳೆಯೂ ಶಾಲೆಗೆ ರಜೆ

ಆಸ್ಪತ್ರೆ, ಮೆಡಿಕಲ್ ಶಾಪ್, ದಿನಸಿ ಅಂಗಡಿ, ಹೋಟೆಲ್ ನಲ್ಲಿ ಪಾರ್ಸೆಲ್, ತರಕಾರಿ ಅಂಗಡಿ, ಮಾಂಸದಂಗಡಿ, ಹಾಲು ಮತ್ತು ಪೊಲೀಸ್, ವೈದ್ಯಕೀಯ ಮಾಧ್ಯಮ ಸೇವೆ ಸಿಗಲಿದೆ.

ಕೆಎಸ್‌ಆರ್ ಟಿಸಿ, ಕ್ಯಾಬ್, ಆಟೋ ಸೇವೆ ,ಜೊತೆಗ ವಾಣಿಜ್ಯ ಮಳಿಗೆ ಇನ್ನಿತರ ಅಂಗಡಿಗಳು ಸಂಪೂರ್ಣ ಬಂದ್ ಆಗಿವೆ.