ಶಿರಸಿ : ಕೊರೋನಾ ಸೋಂಕು ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಮಲೆನಾಡ ಶಕ್ತಿ ದೇವತೆ ಶಿರಸಿಯ ಮಾರಿಕಾಂಬಾ ದೇವಸ್ಥಾನವನ್ನ ಲಾಕ್ ಡೌನ್ ಮಾಡಲಾಗಿದೆ. ಮಾರಿಕಾಂಬಾ ದೇವಸ್ಥಾನದ ಪಕ್ಕದಲ್ಲಿನ ವ್ಯಕ್ತಿ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆತ ನಿತ್ಯವೂ ಸಹ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದ.
ಈ ಕಾರಣಕ್ಕಾಗಿ ಮುಂದಿನ ಆದೇಶ ಬರುವವರೆಗೂ ಮಾರಿಕಾಂಬಾ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ನಿಷೇಧ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟೇಶ ನಾಯ್ಕ ಅವರು ಮಾಹಿತಿ ನೀಡಿದ್ದಾರೆ.