ಇಂದು ಉತ್ತರ ಕನ್ನಡದಲ್ಲಿ ಸುಮಾರು 81 ಜನರಿಗೆ ಇಂದು ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು, ಸೋಂಕಿತರ ಸಂಖ್ಯೆ ಇಡೀ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ.ಜಿಲ್ಲೆಯಲ್ಲಿ ಇಂದು ಕೊರೋನಾ ಸ್ಫೋಟವಾಗಿದ್ದು, ಸೋಂಕಿತರ ಸಂಖ್ಯೆ ಗರಿಷ್ಟ ಮಟ್ಟದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ.
ಜಿಲ್ಲೆಯ ಭಟ್ಕಳದಲ್ಲಿ 45, ಕುಮಟಾದಲ್ಲಿ 20, ಹೊನ್ನಾವರದಲ್ಲಿ 9, ಕಾರವಾರದಲ್ಲಿ 5, ಯಲ್ಲಾಪುರ ಹಾಗೂ ಶಿರಸಿಯಲ್ಲಿ ತಲಾ 1 ಪ್ರಕರಣ ದೃಢಪಟ್ಟಿದೆ ಎನ್ನಲಾಗಿದೆ.
ಸಂಜೆ ಹೆಲ್ತ್ ಬುಲೆಟಿನ್ ನಲ್ಲಿ ಸೋಂಕಿತರ ನಿಖರ ಸಂಖ್ಯೆ ಹಾಗೂ ಯಾರ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ ಎಂಬುದು ಸ್ಪಷ್ಟವಾಗಲಿದೆ. ಈಗಾಗಲೇ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೆಲವೆಡೆ ಪ್ರಾರಂಭಿಸಿರುವುದರಿಂದ ಆಯಾ ತಾಲೂಕಿನ ಸೋಂಕಿತರು ಅಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ.