ಹೊನ್ನಾವರ: ಹೊನ್ನಾವರ ತಾಲೂಕಿನ ಹಳದೀಪುರದ ಸಮೀಪ ಜ್ವರಕ್ಕೆ ಹೆದರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ತಾಲೂಕಿನ ಹಳದಿಪುರ ಕಿರುಬೈಲ್ ನಿವಾಸಿ ಶಂಕರ್ ನಾಯ್ಕ ಎಂದು ಗುರುತಿಸಲಾಗಿದೆ.
ಈತನಿಗೆ ಎರಡು ದಿನದಿಂದ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿದ್ದು, ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಜ್ವರ ಬಂದಿರುವುದನ್ನು ಮನಸಿಗೆ ಹಚ್ಚಿಕೊಂಡು ಮಾವಿನ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.