ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದ ಕಾತರತೆಗೆ ಸಚಿವ ಸುರೇಶಕುಮಾರ್ ತೆರೆ ಎಳೆದಿದ್ದು, ಜು.14 ಮಂಗಳವಾರದಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಮ್ಮ ಫೇಸ್‌ಬುಕ್ ಪೇಜಿನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಮಾರ್ಚ್‌ನಲ್ಲಿ ನಡೆಯುತ್ತಿದ್ದ 2020 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ಕೊರೊನಾ ಲಾಕ್‌ಡೌನ್ ನಿಂದಾಗಿ ಇಂಗ್ಲೀಷ್ ಪರೀಕ್ಷೆ ಒಂದನ್ನು ಮುಂದೂಡಲಾಗಿತ್ತು. ಅದನ್ನೂ ಸುಸೂತ್ರವಾಗಿ ಜೂನ್ ತಿಂಗಳಲ್ಲಿ ಪರೀಕ್ಷಾ ಮಂಡಳಿ ಮಾಡಿ ಮುಗಿಸಿತ್ತು. ಇದೀಗ ವಿದ್ಯಾರ್ಥಿಗಳ ಫಲಿತಾಂಶ ಸಿದ್ದವಾಗಿದ್ದು, ಅದನ್ನು ನಾಳೆ ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ವಿದ್ಯಾರ್ಥಿಗಳ ನಾಳೆ ಮಧ್ಯಾಹ್ನ 12 ಗಂಟೆ ನಂತರ ಆನ್ ಲೈನ್‌ನಲ್ಲಿ www.karresults.nic.in ಈ ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.