ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ. ಅಂತಹ ಪರಿಸ್ಥಿತಿ ನಮ್ಮ ಜಿಲ್ಲೆಗೆ ಒದಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಾದ್ಯಂತ ಕೋವಿಡ್ -19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಹಲವೆಡೆ ಲಾಕ್ ಡೌನ್ ಘೋಷಿಸಲಾಗಿದೆ ಆ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

RELATED ARTICLES  ಶಿರಸಿ ಸಿದ್ದಾಪುರ ಹೆದ್ದಾರಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನದ ನಾಲ್ಕನೇ ಹಂತ ಯಶಸ್ವಿ.

ಭಟ್ಕಳ ಹೊರತುಪಡಿಸಿ ಮಧ್ಯಾಹ್ನ 2 ಗಂಟೆ ಬಳಿಕ ಜಿಲ್ಲೆಯಾದ್ಯಂತ ಜನರು ಸ್ವಯಂ ಘೋಷಿತ ಬಂದ್ ಮಾಡಿದ್ದಾರೆ. ಸ್ವಯಂ ಘೋಷಿತ ಬಂದ್ ನಡೆಸುವುದಕ್ಕೆ ನಾವು ಬೆಂಬಲ ನೀಡಿದ್ದೇವೆ ಎಂದರು.ಭಟ್ಕಳದಲ್ಲಿ 2 ಗಂಟೆಯವರೆಗೆ ಸರ್ಕಾರದಿಂದ ಇರುವ ಲಾಕ್‌ಡೌನ್ ಮುಂದುವರಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

RELATED ARTICLES  ಒಂದೊಂದು ಹಣತೆಯ ಬೆಳಕೂ ನಂದುತ್ತಾ ಹೋದಹಾಗೆ ನೋಡುನೋಡುತ್ತಲೆ ಮರೆಯಾದ ಮಹಾನುಭಾವರು ನೆನಪಾದರು.